ಧಾರವಾಡ: ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 8 ರಂದು ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.
ಏನಿದು ಪ್ರಕರಣ?: ಯುವಕ ಹಾಗೂ ಯುವತಿ ಇಬ್ಬರೂ ಸೇರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಹೋಗಿದ್ದರು. ಈ ವೇಳೆ, ಇಬ್ಬರ ನಡುವೆ ಜಗಳ ನಡೆದಿತ್ತು. ಜಗಳ ತಾರಕಕ್ಕೇರಿದ್ದು, ಆರೋಪಿ ಯುವಕ ಕಟರ್ನಿಂದ ಯುವತಿಗೆ ಇರಿದಿದ್ದನು.
ಸದ್ಯ ಆರೋಪಿ ಇಮಾಮ್ ಜಾಫರ್ ಶೇಖ್ ಬಂಧಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಹಲ್ಲೆಗೊಳಗಾಗಿದ್ದ ಯುವತಿಗೆ 20 ವರ್ಷ ವಯಸ್ಸಾಗಿತ್ತು. ಆಕೆಯ ಕುತ್ತಿಗೆ ಹಾಗೂ ಕೈಗೆ ಇಮಾಮಜಾಫರ್ ಕಟರ್ನಿಂದಿ ಇರಿದು ಗಾಯಗೊಳಿಸಿದ್ದನು. ಗಾಯಗೊಂಡ ಸ್ಥಿತಿಯಲ್ಲಿ ಯುವತಿಯನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಯುವತಿಯನ್ನ ಧಾರವಾಡ ಗ್ರಾಮೀಣ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.
ಯುವತಿ ಕೊಟ್ಟ ಮಾಹಿತಿ ಆಧಾರದ ಮೇಲೆ ಧಾರವಾಡ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ನಡುವೆ ಬಹಳ ವರ್ಷಗಳಿಂದ ಪ್ರೀತಿ ಸಾಗುತ್ತಿತ್ತು. ಇತ್ತೀಚೆಗೆ ಯುವತಿ ಬೇರೆ ಯುವಕನ ಜೊತೆ ಮೊಬೈಲ್ನಲ್ಲಿ ಮಾತನಾಡುವುದನ್ನ ಇಮಾಮಜಾಫರ್ ಗಮನಿಸಿದ್ದನು. ಹೀಗಾಗಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಕಟರ್ನಿಂದ ಹಲ್ಲೆ ಮಾಡಿದ್ದನು ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ. ಇನ್ನು ಈ ಘಟನೆ ಕುರಿತು ಶಹರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ತಳ್ಳಿದ್ದಾರೆ.
ಓದಿ:ತಹಶೀಲ್ದಾರ್ ಮೇಲೆ ಜೆಸಿಬಿ, ಟ್ರ್ಯಾಕ್ಟರ್ ಹತ್ತಿಸಿ ಹಲ್ಲೆಗೆ ಯತ್ನ ... ಓಡಿ ಹೋಗಿ ಜೀವ ಉಳಿಸಿಕೊಂಡ ಸಿಬ್ಬಂದಿ
ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ:ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಬಾಣಸವಾಡಿ ಮುಖ್ಯ ರಸ್ತೆಯಲ್ಲಿ ಬುಧವಾರ ಸಂಜೆ ದುಷ್ಕರ್ಮಿಗಳು ಹಳೇ ದ್ವೇಷದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬನ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಬಾಣಸವಾಡಿ ನಿವಾಸಿ ಮದನ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಕೃತ್ಯವೆಸಗಿದ ಐದಾರು ಮಂದಿ ಆರೋಪಿಗಳಿಗಾಗಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದರು. ತಮಿಳುನಾಡಿನ ಚೆನ್ನೈ ಮೂಲದ ಮದನ್ ಈ ಮೊದಲು ಬೆಂಗಳೂರಿನಲ್ಲಿಯೇ ವಾಸವಾಗಿದ್ದ. ನಾಲ್ಕು ವರ್ಷಗಳ ಹಿಂದೆ ಚೆನ್ನೈಗೆ ಹೋಗಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ತಿಂಗಳ ಹಿಂದೆ ಮತ್ತೆ ಬೆಂಗಳೂರಿಗೆ ಬಂದಿದ್ದು, ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂಬುದಾಗಿ ತಿಳಿದು ಬಂದಿದೆ.