ಹುಬ್ಬಳ್ಳಿ: ಅವಳಿನಗರದಲ್ಲಿ ಹೋಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಹೆಚ್ಚಿನ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ. ಯಾವುದೇ ಅಹಿತಕರ ಘಟನೆಗಳು ನಡೆದರೂ ಅದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹು - ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ಸರ್ವಧರ್ಮ ಸೌಹಾರ್ದತೆ ಸಭೆ ಕೂಡ ಮಾಡಿ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದರು.
ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಲ್ಲಿಯೇ ಬೇರೆ ಕಡೆಯಿಂದ 15 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗುತ್ತದೆ.ಇದರ ಜೊತೆಗೆ 4 ಜನ ಡಿವೈಎಸ್ಪಿ, 20 ಜನ ಪಿಐ, 70 ಜನ ಪಿಎಸ್ಐ, 500 ಜನ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಹುಬ್ಬಳ್ಳಿ-ಧಾರವಾಡದ ಆಯಕಟ್ಟಿನ ಪ್ರದೇಶಗಳಲ್ಲಿ ಮಾತ್ರವಲ್ಲದೆ ಎಲ್ಲಾ ಕಡೆಯೂ ಸೂಕ್ತ ಬಂದೋಬಸ್ತ್ ಮಾಡುವ ಮೂಲಕ ಹೋಳಿ ಹಬ್ಬದ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಇದನ್ನೂ ಓದಿ: ಉಡುಪಿಯಲ್ಲಿ ಹಿಜಾಬ್ ಪರ ಗೋಡೆ ಬರಹ.. ಕ್ರಮಕ್ಕೆ ಆಗ್ರಹ