ಧಾರವಾಡ:ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದಲ್ಲಿ ಸಚಿವ ಬಿ.ಸಿ. ಪಾಟೀಲ್ ಟ್ರ್ಯಾಕ್ಟರ್ ಚಲಾಯಿಸಿದರು. ರೈತ ಮಲ್ಲಿಕಾರ್ಜುನ ಯಕ್ಕುಂಡಿ ಅವರ ಹೊಲದಲ್ಲಿ ಹತ್ತಿ ಬೆಳೆಯನ್ನು ಸಚಿವರು ಕಟಾವು ಮಾಡಿದರು.
ಬಳಿಕ ಮಾತನಾಡಿದ ಬಿ.ಸಿ. ಪಾಟೀಲ್, ನವಲಗುಂದ ತಾಲೂಕಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಮಾಡುತ್ತಿದ್ದೇನೆ. ವಿವಿಧ ಗ್ರಾಮಗಳಲ್ಲಿ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇನೆ. ಇಡೀ ದಿನ ರೈತರೊಂದಿಗೆ ಇರುತ್ತೇನೆ. ರೈತರೊಂದಿಗೆ ಸಂವಾದ ಮಾಡಿ ಸಮಸ್ಯೆ ಆಲಿಸುತ್ತೇನೆ ಎಂದರು.