ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ - AITUC protests

ಪ್ರಸ್ತುತ ಕೋವಿಡ್-19 ಕಾಲದಲ್ಲಿ ಯೋಜನಾ ಕಾರ್ಮಿಕರು ಅದರಲ್ಲೂ ವಿಶೇಷವಾಗಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕರ್ತರು, ಆರೋಗ್ಯ ಕ್ಷೇತ್ರದಲ್ಲಿರುವ ಇತರರು ಕೊರೊನಾ ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದಾರೆ. ಅವರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ ನಡೆಸಿತು.

ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ
ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ

By

Published : Aug 10, 2020, 5:16 PM IST

Updated : Aug 10, 2020, 6:35 PM IST

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ಧಾರವಾಡ ಜಿಲ್ಲೆ ಜಂಟಿ ಸಮಿತಿಯಿಂದ ನಗರದ ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ದೇಶದ ಕೇಂದ್ರ ಕಾರ್ಮಿಕ ಸಂಘಟನೆಗಳು ಯೋಜನಾ ಕಾರ್ಮಿಕರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಗಮನ ಸೆಳೆಯುತ್ತಲೇ ಬಂದಿವೆ. ಆದರೂ ಸರ್ಕಾರ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕದ ಕಾಲದಲ್ಲಿ ಯೋಜನಾ ಕಾರ್ಮಿಕರು ಅದರಲ್ಲೂ ವಿಶೇಷವಾಗಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಎಚ್.ಎಂ)ಕಾರ್ಯಕರ್ತರು ಹಾಗೂ ಆರೋಗ್ಯ ಕ್ಷೇತ್ರದಲ್ಲಿರುವ ಇತರರು ಕೊರೊನಾ ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿದ್ದಾರೆ. ತಳಮಟ್ಟದ ಕೆಲಸಗಾರರಾದ ಇವರಿಗೆ ಯಾವುದೇ ಸಮರ್ಪಕ ಸುರಕ್ಷತೆ ಒದಗಿಸಿಲ್ಲ. ಈ ಸಂದರ್ಭದಲ್ಲಿ ಅಸುರಕ್ಷತೆಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮೃತಪಟ್ಟಿದ್ದಾರೆ. ಕೋವಿಡ್ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರಧಾರಿಗಳಾದ ಇವರಿಗೆ ಸುರಕ್ಷೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಇನ್ನೂ ರೈತ ವಿರೋಧಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕು, ಹಮಾಲಿ ಕಾರ್ಮಿಕರಿಗೆ ಭವಿಷ್ಯನಿಧಿ, ಪಿಂಚಣಿ ಯೋಜನೆ ಜಾರಿಗೋಳಿಸಬೇಕು, ವಸತಿ ರಹಿತ ಹಮಾಲಿ ಕಾರ್ಮಿಕರಿಗೆ ಸೂಕ್ತ ವಸತಿ ಯೋಜನೆ ಜಾರಿಮಾಡಬೇಕು, ಎಲ್ಲಾ ಹಮಾಲಿ ಕಾರ್ಮಿಕರಿಗೆ 6 ತಿಂಗಳು 7500 ರೂ. ಆರ್ಥಿಕ ನೆರವು, ರೇಷನ್ ಕಿಟ್ ನೀಡಬೇಕು ಎಂದು ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ್​ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

Last Updated : Aug 10, 2020, 6:35 PM IST

ABOUT THE AUTHOR

...view details