ಧಾರವಾಡ:ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ವೀರಶೈವ-ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ತಿಳಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿರುವ ಅವರು, ಸಪ್ಟೆಂಬರ್ 24 ರಂದು ಗುರುವಾರ ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಲಾಗುವುದು. ಧರಣಿಯಲ್ಲಿ ವಿವಿಧ ಮಠಾಧೀಶರು, ಸಮಾಜದ ಗಣ್ಯರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.