ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಕೋಚಿಂಗ್ ಕ್ಲಾಸ್ ಪ್ರಾರಂಭಿಸಿರುವ ಆರೋಪ ಕೇಳಿಬಂದಿದೆ. ಯಾವುದೇ ನಿಯಮ ಪಾಲನೆ ಮಾಡದೇ ಕ್ಲಾಸ್ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾನಗರದ ಶಿರೂರು ಪಾರ್ಕ್‌ನಲ್ಲಿ ನಡೆಯುತ್ತಿರುವ ಪಂಚಮುಖಿ ಕೋಚಿಂಗ್ ಕ್ಲಾಸ್‌ನಲ್ಲಿ ಲಾಕ್‌ಡೌನ್ ಆದೇಶ ಕಡೆಗಣಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಅಲ್ಲದೇ ಕೊಠಡಿಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿ ಶಿಕ್ಷಕರು ಪಾಠ ಮಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ ಎಂದು ತಿಳಿದುಬಂದಿದೆ.