ಹುಬ್ಬಳ್ಳಿ: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿ ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ ವಿರುದ್ಧ ಪ್ರಕರಣ ದಾಖಲಾಗಿದೆ. ಗಿರೀಶ್ ಗದಿಗೆಪ್ಪಗೌಡರ ಇತ್ತೀಚೆಗೆ ಸ್ನೇಹಿತರೊಂದಿಗೆ ಬಂದು ನನ್ನ ತವರು ಮನೆಯವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ.
ಅಲ್ಲದೇ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ಜಯಲಕ್ಷ್ಮಿ ಗದಿಗೆಪ್ಪಗೌಡ ಪತಿ ಸೇರಿ ಐವರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.