ಕರ್ನಾಟಕ

karnataka

ETV Bharat / state

ಆಕ್ಸಿಜನ್ ಕೊರತೆಯಿಂದ ಯುವಕ ಸಾವು: ಕಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ - ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಆರೋಪ

ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗದೆ, ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

kims-doctors
ಕಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

By

Published : May 12, 2021, 9:06 AM IST

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡದೆ ಯುವಕ ಸಾವನ್ನಪ್ಪಿದ್ದಾನೆ ಎಂದು ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಈಶ್ವರ ಧಾರವಾಡ ಎಂಬಾತ ಕಳೆದ ಎರಡು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ದಾಖಲಾಗಿದ್ದ. ‌ಆದರೆ ರಕ್ತದ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗೆ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದರು. ಬಳಿಕ ಏಕಾಏಕಿ ಆಕ್ಸಿಜನ್ ಸಹ ಕೊರತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಇಷ್ಟಾಗುವಾಗ ಯುವಕ ಕೊನೆಯುಸಿರೆಳೆದಿದ್ದಾನೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ಕಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

"ಕಿಮ್ಸ್ ವೈದ್ಯರು ಸರಿಯಾದ ಚಿಕಿತ್ಸೆ ನೀಡಿದ್ರೆ ನಮ್ಮ ಮಗ ಉಳಿಯುತ್ತಿದ್ದ. ಆದ್ರೆ ಕಿಮ್ಸ್​ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ" ಎಂದು ಮಗನನ್ನು ಕಳೆದುಕೊಂಡ ತಾಯಿ ಕಣ್ಣೀರಿಡುತ್ತಿದ್ದಾರೆ.

ABOUT THE AUTHOR

...view details