ಹುಬ್ಬಳಿ :ರಾಜ್ಯದ ಸಮ್ಮಿಶ್ರ ಸರ್ಕಾರದ ಮಾದರಿಯಲ್ಲಿಯೇ ನವಲಗುಂದ ಪುರಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಎನ್.ಹೆಚ್. ಕೋನರೆಡ್ಡಿ ಹೇಳಿದ್ದಾರೆ.
ನವಲಗುಂದ ಪುರಸಭೆಯಲ್ಲಿ ಮೈತ್ರಿ ಕೈ ಮೇಲು
ನವಲಗುಂದ ಪುರಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾದರಿಯಲ್ಲಿಯೇ ಆಡಳಿತ ನಡೆಸಲು ಸ್ಥಳೀಯ ಕೈ, ದಳ ನಾಯಕರು ನಿರ್ಧರಿಸಿದ್ದಾರೆ.
ನವಲಗುಂದ ಪುರಸಭೆ
ನವಲಗುಂದ ಪುರಸಭೆ 23 ಸ್ಥಾನಗಳಲ್ಲಿ ಜೆಡಿಎಸ್ 9 ಸ್ಥಾನಗಳನ್ನು ಗೆದ್ದಿದೆ, ಆದ್ರೆ, ಜೆಡಿಎಸ್‌ಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಹೀಗಾಗಿ ರಾಜ್ಯದ ಮೈತ್ರಿ ಸರ್ಕಾರದ ಮಾದರಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ನವಲಗುಂದ ಪುರಸಭೆಯಲ್ಲಿ ಅಧಿಕಾರ ನಡೆಸಲಿದೆ ಎಂದರು.
ಕಾಂಗ್ರೆಸ್ ನಾಯಕ ಆನಂದ ಅಸೂಟಿ ಕೂಡ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ನವಲಗುಂದ ಪುರಸಭೆಯಲ್ಲಿ ಕಾಂಗ್ರೆಸ್ 7 ಸ್ಥಾನ ಪಡೆದುಕೊಂಡರೆ, ಬಿಜೆಪಿ 6 ಸ್ಥಾನ ಗೆದ್ದಿದೆ. ಓರ್ವ ಪಕ್ಷೇತರ ಅಭ್ಯರ್ಥಿ ಜಯ ಸಾಧಿಸಿದ್ದಾರೆ.