ಧಾರವಾಡ : ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಅವರ 129 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.
ಅಂಬೇಡ್ಕರ್ ಪುತ್ಥಳಿಗೆ ಡಿಸಿ ಮಾಲಾರ್ಪಣೆ: ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆ - latest darwad news
ಅಂಬೇಡ್ಕರ್ ಅವರ 129 ನೇ ಜನ್ಮ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ದೀಪಾ ಚೋಳನ್ ಜ್ಯುಬ್ಲಿ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಅಂಬೇಡ್ಕರ್ ಪುತ್ಥಳಿಗೆ ಡಿಸಿ ಮಾಲಾರ್ಪಣೆ
ಜ್ಯುಬ್ಲಿ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ, ಜಿಲ್ಲಾ ಪಂಚಾಯತ್ ಸಿಇಒ ಡಾ.ಬಿ.ಸಿ ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುರುಷೋತ್ತಮ,ತಹಸೀಲ್ದಾರ್ ಸಂತೋಷ ಬಿರಾದಾರ ಸೇರಿದಂತೆ ಇತರರು ಇದ್ದರು.