ಧಾರವಾಡ :ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ : ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳಿಂದ ಪುಷ್ಪ ನಮನ - dharwad
ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು..
![ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ : ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳಿಂದ ಪುಷ್ಪ ನಮನ dharwad](https://etvbharatimages.akamaized.net/etvbharat/prod-images/768-512-9781678-thumbnail-3x2-vid.jpg)
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು..
ಡಾ ಬಿ ಆರ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ : ಸಂವಿಧಾನ ಶಿಲ್ಪಿಗೆ ರಾಷ್ಟ್ರನಾಯಕರ ನಮನ
ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ನಿತೇಶ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ. ಗೋಪಾಲ ಕೃಷ್ಣ.ಬಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು.