ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ ಬೆಂಗಳೂರಿಗೆ ರವಾನೆ - ಈಟಿವಿ ಭಾರತ ಕನ್ನಡ

ಹುಬ್ಬಳ್ಳಿಯಲ್ಲಿ 12 ಲಕ್ಷ ಮೌಲ್ಯದ ಅಮೆರಿಕನ್​ ಡೈಮಂಡ್​ ಹರುಳುಗಳ ಗಣೇಶನ ಮೂರ್ತಿಯನ್ನು ತಯಾರಿಸಿ, ಬೆಂಗಳೂರಿಗೆ ರವಾನಿಸಿದ್ದಾರೆ.

ಅಮೆರಿಕನ್ ಡೈಮಂಡ್ ಗಣಪತಿ
ಅಮೆರಿಕನ್ ಡೈಮಂಡ್ ಗಣಪತಿ

By ETV Bharat Karnataka Team

Published : Sep 16, 2023, 12:07 PM IST

Updated : Sep 16, 2023, 3:12 PM IST

12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ

ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೆರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ರವಾನಿಸಲಾಗಿದೆ.

ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ಈ ಗಣೇಶ ಮೂರ್ತಿಯನ್ನು ತಯಾರಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆ.18 ರಂದು ಈ ಗಣಪ ಪ್ರತಿಷ್ಠಾಪನೆಗೊಳ್ಳಲಿದೆ.‌ ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಹೊಂದಿದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವೂ ಸಹ ಅಮೆರಿಕನ್ ಡೈಮಂಡ್ ಹರಳು, ನವರತ್ನ ಹರಳುಗಳಿಂದ ಗಣೇಶ ಮೂರ್ತಿಯನ್ನು ನಿರ್ಮಿಸಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೆರಿಕನ್ ಡೈಮಂಡ್ ಹರಳುಗಳಿಂದ ಅಲಂಕೃತವಾದ ಗಣೇಶ ಮೂರ್ತಿಯನ್ನ ಹುಬ್ಬಳ್ಳಿಯಲ್ಲಿ ನಿರ್ಮಿಸಿಕೊಂಡು ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗ್ತಾರೆ. ಬಳಿಕ ಈ ಡೈಮಂಡ್​ ಗಣಪನ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿ 7 ದಿನಗಳವರೆಗೆ ವಿಶೇಷವಾಗಿ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಈ ಮೂಲಕ ಈ ಸಂಘ ಅದ್ಧೂರಿ ಗಣೇಶೋತ್ಸವ ಆಚರಣೆ ಮಾಡುತ್ತೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್ ಡೈಮಂಡ್​ ಹಾಗೂ ನವರತ್ನ ಹರಳುಗಳಿಂದ ಕೂಡಿದ ಐಶ್ವರ್ಯ ಗಣೇಶ ಮಾದರಿಯಲ್ಲಿ ಗಣೇಶ ಮೂರ್ತಿ ನಿರ್ಮಿಸಿ ಪ್ರತಿಷ್ಠಾಪನೆ ಮಾಲಾಗುತ್ತಿದೆ. ಶುಕ್ರವಾರ ನಗರದಿಂದ ರೈಲಿನ ಮೂಲಕ ಬೆಂಗಳೂರಿಗೆ ಗಣೇಶನನ್ನು ತೆಗೆದುಕೊಂಡು ಹೋಗಲಾಯಿತು.

ಒಂದೇ ಕಟುಂಬದಿಂದ 3 ಲಕ್ಷ ಗಣಪತಿ ಮೂರ್ತಿ ತಯಾರು:ಬೆಳಗಾವಿ ಜಿಲ್ಲೆಯ ಕುಂಬಾರ ಕುಟುಂಬವೊಂದು ಈ ಬಾರಿಯ ಗಣೇಶೋತ್ಸವಕ್ಕಾಗಿ ಬರೋಬ್ಬರಿ 3 ಲಕ್ಷ ಗಣೇಶನ ಮೂರ್ತಿಗಳನ್ನು ತಯಾರಿಸಿದೆ. ಗಣೇಶನ ಮೂರ್ತಿ ತಯಾರಿಸುವುದೇ ಈ ಕುಟುಂಬದ ಕುಲ ಕಸುಬಾಗಿದ್ದು, ಕಳೆದ ಆರು ದಶಕಗಳಿಂದ ಮೂರ್ತಿಗಳನ್ನು ತಯಾರಿಸುತ್ತ ಬಂದಿದೆ. ಅಲ್ಲದೇ ಮಣ್ಣಿನ ಮೂರ್ತಿಗಳನ್ನು ಮಾತ್ರ ತಯಾರಿಸುವುದು ಈ ಕುಟುಂಬದ ಮತ್ತೊಂದು ವಿಶೇಷತೆಯಾಗಿದೆ.

ವಿವಿಧ ರೀತಿಯ ಗಣೇಶನ ಮೂರ್ತಿಗಳನ್ನು ತಯಾರಿಸುವ ಈ ಕುಟುಂಬ ಆರಂಭದಲ್ಲಿ 40 ಮೂರ್ತಿಗಳನ್ನು ಮಾತ್ರ ತಯಾರಿಸುತ್ತಿದ್ದರು. ಇದೀಗ 3 ಲಕ್ಷ ಮೂರ್ತಿಗಳನ್ನು ತಯಾರಿಸಿ ಮಾರಾಟಕ್ಕೆ ಇಟ್ಟಿದ್ದಾರೆ.

ಇದನ್ನೂ ಓದಿ:ಆರು ದಶಕಗಳಿಂದ ಗಣೇಶ ಮೂರ್ತಿ ತಯಾರಿಕೆಯೇ ಈ ಕುಟುಂಬದ ಕುಲ ಕಸಬು: ಈ ಬಾರಿ 3 ಲಕ್ಷಕ್ಕೂ‌ ಅಧಿಕ ಮೂರ್ತಿಗಳು ರೆಡಿ

Last Updated : Sep 16, 2023, 3:12 PM IST

ABOUT THE AUTHOR

...view details