ಹುಬ್ಬಳ್ಳಿ: ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಕೇಂದ್ರ ಗೃಹ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 1ರಂದು ನಡೆಯುವ ಸಹಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್ 1 ಆಗಿದೆ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಇದ್ದೇವೆ. ಏಪ್ರಿಲ್ ಒಂದಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಏಪ್ರಿಲ್ 5ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುವುದು ಇನ್ನೂ ಅಧಿಕೃತವಾಗಿಲ್ಲ ಎಂದರು.