ಧಾರವಾಡ: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ನಡೆಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಶಿಕ್ಷಣ ನೀತಿ-2016 ಹಾಗೂ ಕೇಂದ್ರ ಶಿಕ್ಷಣ ನೀತಿ- 2020ರ ಅಡಿ ಎಲ್‌ಕೆಜಿ-ಯುಕೆಜಿ ಆರಂಭಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ.