ಧಾರವಾಡ: ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಅಂಗನವಾಡಿ ಮಹಿಳಾ ಸೇನಾನಿಗಳಿಗೆ ಸರ್ಕಾರ ವಿಶೇಷ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫಡರೇಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ - State Anganwadi Workers
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ದೀಪಾ ಚೋಳನ ಅವರಿಗೆ ಮನವಿ ಸಲ್ಲಿಸಿದರು.
![ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ Anganwadi women appealing to the government for incentives](https://etvbharatimages.akamaized.net/etvbharat/prod-images/768-512-7379533-990-7379533-1590655197110.jpg)
ಪ್ರೋತ್ಸಾಹಧನಕ್ಕಾಗಿ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಅಂಗನವಾಡಿ ಮಹಿಳಾ ಸೇನಾನಿಗಳು
ಪ್ರೋತ್ಸಾಹಧನಕ್ಕಾಗಿ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಅಂಗನವಾಡಿ ಮಹಿಳಾ ಸೇನಾನಿಗಳು
ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ದೀಪಾ ಚೋಳನ ಅವರಿಗೆ ಮನವಿ ಸಲ್ಲಿಸಿದರು. ನಾವು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಸಂಬಂಧಿ ಮಾಹಿತಿ ಮತ್ತು ಇನ್ನಿತರ ವಿಷಯಗಳನ್ನು ಸಂಗ್ರಹ ಮಾಡುತ್ತಿದ್ದೇವೆ. ಕಾರ್ಯ ನಿರ್ವಹಿಸುತ್ತಿದ್ದ ಕೆಲವರು ಸೋಂಕಿತರಾಗಿದ್ದಾರೆ. ಇನ್ನೂ ಕೆಲವರು ಹಲ್ಲೆಗೊಳಗಾಗಿದ್ದಾರೆ.
ರಾಜ್ಯ ಸರ್ಕಾರ ಸಂಕಷ್ಟಕ್ಕೀಡಾದ ರೈತರು ಸೇರಿದಂತೆ ಹಲವಾರು ವರ್ಗಗಳಿಗೆ, ಶ್ರಮಜೀವಿಗಳಿಗೆ ಪ್ರೋತ್ಸಾಹ ಧನ ನೀಡಿರುವುದು ಸ್ವಾಗತಾರ್ಹ ಅದರಂತೆ ನಮಗೂ ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿದರು.