ಹುಬ್ಬಳ್ಳಿ: ಧರ್ಮಗುರು ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಅಂಜುಮನ್ ಸಮಿತಿ ಮುಖಂಡರು ಇಂದು ಪ್ರತಿಭಟನೆ ನಡೆಸಿದರು.
ಧರ್ಮಗುರುವಿನ ಬಗ್ಗೆ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಅಂಜುಮನ್ ಸಮಿತಿ ಪ್ರತಿಭಟನೆ
ಧರ್ಮಗುರುವಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ನವೀನ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಂಜುಮನ್ ಸಮಿತಿ ಮುಖಂಡರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಅಂಜುಮನ್ ಸಮಿತಿಯಿಂದ ಪ್ರತಿಭಟನೆ
ನಗರದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಸ್ಲಿಂ ಸಮಾಜದ ಮುಖಂಡರು ಹಾಗೂ ಅಂಜುಮನ್ ಸಮಿತಿ ಸದಸ್ಯರು, ಧರ್ಮಗುರುವಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ನವೀನ್ ವಿರುದ್ಧ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ ಮಾಡಿದರು.
ರಾಜ್ಯ ಸರ್ಕಾರ ನವೀನ್ ವಿರುದ್ಧ ಈ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.