ಹುಬ್ಬಳ್ಳಿ:ಉತ್ತರ ಕರ್ನಾಟಕದ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಬೆಳಕಿಗೆ ಬಂತು ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಮತ್ತೊಂದು ಎಡವಟ್ಟು...! - Kim's Hospital
ಕಿಮ್ಸ್ ಆಡಳಿತ ಮಂಡಳಿ ಭದ್ರತಾ ಸಿಬ್ಬಂದಿಯ ಆರೋಗ್ಯ, ಸೌಲಭ್ಯಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ವಿಚಾರ ಬಯಲಾಗಿದೆ.
ಸೌಲಭ್ಯಗಳ ಕೊರತೆ ನಡುವೆಯೂ ಕಿಮ್ಸ್ ನ ಭದ್ರತಾ ಸಿಬ್ಬಂದಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಬರುವವರನ್ನು ತಪಾಸಣೆ ಮಾಡುವಾಗ ಬಳಸಬೇಕಾದ ಸಾಮಾನ್ಯ ಕಿಟ್ಗಳನ್ನೂ ಸಹ ಇಲ್ಲಿ ನೀಡಲಾಗುತ್ತಿಲ್ಲ ಎನ್ನಲಾಗ್ತಿದೆ.
ಥರ್ಮಲ್ ಸ್ಕ್ಯಾನಿಂಗ್ ಮಷಿನ್ ಮಾತ್ರವಲ್ಲದೇ ಸ್ಯಾನಿಟೈಜರ್, ಹ್ಯಾಂಡಗ್ಲೌಸ್ ಕೂಡ ನೀಡಿಲ್ಲ. ಈ ಹಿನ್ನೆಲೆ ಕೆಲ ಸಿಬ್ಬಂದಿ ಸ್ವಂತ ಹಣಕೊಟ್ಟು ಮಾಸ್ಕ್ ಹಾಕಿಕೊಂಡು ಕರ್ತವ್ಯ ನಿರ್ವಹಿಸಿದ್ರೆ, ಇನ್ನೂ ಕೆಲವರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇನ್ನಾದರೂ ಕಿಮ್ಸ್ ಆಡಳಿತ ಮಂಡಳಿ ಜನರಿಗಾಗಿ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಸುರಕ್ಷತೆ ಬಗ್ಗೆ ಗಮನಹರಿಸಬೇಕಿದೆ.