ಕರ್ನಾಟಕ

karnataka

ETV Bharat / state

ಮಾ.19ರಿಂದ 21 ರವರೆಗೂ ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆ ಸ್ಥಗಿತ - ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆ

ಮಾ.18ರಂದು ಮಾತ್ರ ತರಕಾರಿ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಮಾ.19ರಿಂದ ಮಾ.21ರ ವರೆಗೆ ಮಾರುಕಟ್ಟೆಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಿದ್ರು.

apmc shut down due to corona virus
ಕೊರೊನಾ ಎಫೆಕ್ಟ್

By

Published : Mar 18, 2020, 9:07 AM IST

ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಹುಬ್ಬಳ್ಳಿಯ ಎಪಿಎಂಸಿಯಲ್ಲಿ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಕೊರೊನಾ ಎಫೆಕ್ಟ್

ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಚಿತ್ರ ಮಂದಿರ, ಪಬ್, ಮಾಲ್ ಹಾಗೂ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ನಿರ್ಬಂಧ ಹೇರಿದೆ.

ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಎಪಿಎಂಸಿ ವರ್ತಕರ ಸಂಘದ ವತಿಯಿಂದ ಸಭೆ ನಡೆಸಲಾಯಿತು. ಮಾ.18ರಂದು ಮಾತ್ರ ತರಕಾರಿ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಮಾ.19ರಿಂದ ಮಾ.21ರ ವರೆಗೆ ಮಾರುಕಟ್ಟೆಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಿದ್ರು.

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಸದುದ್ದೇಶದಿಂದ ಮಾ.19 ರಿಂದ ಮಾ.21ರ ವರಗೆ ಎಪಿಎಂಸಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಚನ್ನಬಸಪ್ಪ ಹೊಸಮನಿ ತಿಳಿಸಿದ್ರು.

ಇನ್ನೊಂದೆಡೆ, ಕೊರೊನಾ ಹಿನ್ನೆಲೆ ಧಾರವಾಡ ಜಿಲ್ಲಾಡಳಿತ ಸೆಕ್ಷನ್ 144 ಜಾರಿ ಮಾಡಿದೆ.

ABOUT THE AUTHOR

...view details