ಕರ್ನಾಟಕ

karnataka

ETV Bharat / state

ಈದ್ಗಾ ಮೈದಾನದಲ್ಲಿ ನಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ಕೊಡಿ: ಕ್ರೈಸ್ತ ಸಮುದಾಯದ ಮನವಿ - hubballi idga maidan

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕ್ರೈಸ್ತ ಸಮುದಾಯದವರಿಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಯುನೈಟೆಡ್ ಧಾರವಾಡ ಜಿಲ್ಲಾ ಕ್ರೈಸ್ತ ಸಮುದಾಯದ ವತಿಯಿಂದ ಈ ಮನವಿ ಸಲ್ಲಿಸಲಾಗಿದೆ.

Appeal from the Christian community
ಕ್ರೈಸ್ತ ಸಮುದಾಯದ ಮನವಿ

By

Published : Aug 29, 2022, 3:10 PM IST

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಬೆನ್ನಲೇ ಕ್ರೈಸ್ತ ಸಮುದಾಯದವರು ಕೂಡ ಈದ್ಗಾ ಮೈದಾನದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ. ಪಾಲಿಕೆ ಆಯುಕ್ತಾರಾದ ಡಾ. ಗೋಪಾಲಕೃಷ್ಣ ಅವರಿಗೆ ಯುನೈಟೆಡ್ ಧಾರವಾಡ ಜಿಲ್ಲಾ ಕ್ರೈಸ್ತ ಸಮುದಾಯದ ವತಿಯಿಂದ ಮನವಿ ಸಲ್ಲಿಸಲಾಗಿದೆ.

ಮನವಿ ಪತ್ರ

ಈ ವೇಳೆ ಮಾತನಾಡಿದ ಕ್ರೈಸ್ತ ಸಮುದಾಯದ ಮುಖಂಡರು ಹಾಗೂ ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟ್ಲಾ, ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಮ್ಮ ಸಹಮತವಿದೆ. ಅದರಂತೆ ಕ್ರೈಸ್ತ ಸಮುದಾಯಕ್ಕೂ ಈದ್ಗಾ ಮೈದಾನ ಬಳಕೆಗೆ ಅವಕಾಶ ನೀಡಬೇಕು. ಇದಕ್ಕೂ ಕೂಡ ಸಾಮಾನ್ಯ ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ. ಈ ಬಗ್ಗೆ ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ ಎಂದರು.

ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟ್ಲಾ

ನಗರದ ಈದ್ಗಾ ಮೈದಾನ ಸೇರಿದಂತೆ ಸುತ್ತಮುತ್ತಲಿನ ಪ್ರದೇಶ ಕ್ರೈಸ್ತ ಮಿಷನರಿ ಒಡೆತನದ್ದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣ ಕೋರ್ಟ್​ನಲ್ಲಿದೆ. ಆದರೂ ಕೋರ್ಟ್ ವಾರ್ಷಿಕವಾಗಿ 2 ಬಾರಿ ಮುಸ್ಲಿಂ ಬಾಂಧವರಿಗೆ ಪ್ರಾರ್ಥನೆಗೆ, ಸ್ವಾತಂತ್ರ್ಯೋತ್ಸವಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಇದೀಗ ಕ್ರೈಸ್ತ ಸಮುದಾಯದವರಿಗೂ ವರ್ಷಕ್ಕೆ 2 ಬಾರಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಮುಂದುವರಿದ ಈದ್ಗಾ ಮೈದಾನ ಹೋರಾಟ.. ಹಿಂದೂಸ್ತಾನ್​ ಜನತಾ ಪಾರ್ಟಿಯಿಂದ ಪ್ರತಿಭಟನೆ

ABOUT THE AUTHOR

...view details