ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ವೈದ್ಯರು, ಎ.ಮ್.ಬಿ.ಬಿ.ಎಸ್. ವೈದ್ಯರು ಹಾಗೂ ಸಾಮಾನ್ಯ ವೈದ್ಯರು, ಅರವಳಿಕೆ ತಜ್ಞರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು, ಎಲ್.ಡಿ.ಸಿ., ಡೇಸ್ಟರ್, ವಾರ್ಡಬಾಯ್, ಆಯಾ ಮತ್ತು ಆಂಬ್ಯೂಲೆನ್ಸ್ ವಾಹನ ಚಾಲಕರುಗಳ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ಹನ್ನೊಂದು ತಿಂಗಳ ಅವಧಿಗೆ ಸೇವೆಯನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು ಎಮ್.ಬಿ.ಬಿ.ಎಸ್. ಸಾಮಾನ್ಯ ವೈದ್ಯರು, ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗಳನ್ನು ಹನ್ನೊಂದು ತಿಂಗಳ ಅವಧಿಗೆ ಮಾಸಿಕ ಗೌರವಧನ ಆಧಾರದ ಮೇಲೆ ಸೇವೆ ಪಡೆದುಕೊಳ್ಳಲು ಉದ್ದೇಶಿಸಲಾಗಿದೆ.
ಈ ಹುದ್ದೆಗಳಿಗೆ ಸಂಬಂಧಪಟ್ಟ ವಿದ್ಯಾರ್ಹತೆ ಹೊಂದಿದ ಆಸಕ್ತಿವುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ಧೃಡೀಕೃತ ಸರ್ಟಿಫಿಕೇಟ್ಗಳೊಂದಿಗೆ ನವೆಂಬರ್ 7 ರಿಂದ ನವೆಂಬರ್ 18, 2023 ರವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹು.ಧಾ.ಮ.ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಆಡಳಿತ ಕಚೇರಿ ನಂ.14ರಲ್ಲಿ ದ್ವಿತೀಯ ದರ್ಜೆ ಸಹಾಯಕರ ಹತ್ತಿರ ಹೆಸರು ನೊಂದಾಯಿಸಿಕೊಳ್ಳಬಹುದು.