ಕರ್ನಾಟಕ

karnataka

ETV Bharat / state

ಲೋಕಸಭಾ ಚುನಾವಣೆಗೆ ಬಂದ ಅರ್ಜಿಗಳ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಬೇಕಾಗುತ್ತದೆ : ಹೆಬ್ಬಾಳ್ಕರ್​ - Applications of Aspirants

ಲೋಕಸಭೆ ಚುನಾವಣೆ ಸಂಬಂಧ ಸಲ್ಲಿಕೆಯಾಗಿರುವ ಆಕಾಂಕ್ಷಿಗಳ ಪಟ್ಟಿಯನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ಕಳುಹಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

applications-of-aspirants-for-lok-sabha-elections-should-be-kept-confidential-says-laxmi-hebbalkar
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By ETV Bharat Karnataka Team

Published : Jan 3, 2024, 3:03 PM IST

ಲೋಕಸಭಾ ಚುನಾವಣೆಗೆ ಬಂದ ಅರ್ಜಿಗಳ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಬೇಕಾಗುತ್ತದೆ : ಹೆಬ್ಬಾಳ್ಕರ್​

ಧಾರವಾಡ: ಲೋಕಸಭಾ ಚುನಾವಣೆ ಸಂಬಂಧ ಬಂದ ಅರ್ಜಿಗಳನ್ನು ಗೌಪ್ಯವಾಗಿ ಇಟ್ಟುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಜನವರಿ 10 ರಂದು ಸಭೆ ಕರೆಯಲಾಗಿದೆ. ಜಿಲ್ಲೆಯ ಎಲ್ಲ ಮುಖಂಡರನ್ನು ಕರೆದುಕೊಂಡು ಎರಡನೇ ಹಂತದ ಸಭೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸಂಬಂಧ ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 10-12 ಜನ ಪ್ರಮುಖರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅಳೆದು ತೂಗಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಹಾಕಿದವರಿಗೆ ಟಿಕೆಟ್ ಕೊಡಬೇಕಾಗುತ್ತದೆ. ಕೆಲವೊಂದು ಸಂದರ್ಭದಲ್ಲಿ ಬೇರೆಯವರಿಗೆ ಟಿಕೆಟ್​ ನೀಡಬೇಕಾಗುತ್ತದೆ. ರಾಜಕಾರಣ ಎಂದ ಮೇಲೆ ಇದೆಲ್ಲ ನಡೆಯುತ್ತದೆ. ಲೋಕಸಭೆ ಚುನಾವಣೆ ಸಂಬಂಧ ಸಲ್ಲಿಕೆಯಾಗಿರುವ ಆಕಾಂಕ್ಷಿಗಳ ಪಟ್ಟಿಯನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದರೆ ನಾವು ಸ್ವಾಗತ ಮಾಡುತ್ತೇವೆ. ಆದರೆ ಅವರಿಗೆ ಟಿಕೆಟ್ ಕೊಡುವ ವಿಚಾರ ನಮ್ಮ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಚಿವರು ಹೇಳಿದರು.

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಸಿಎಂ ಮಾತನಾಡಿದ್ದಾರೆ ಎಂದರು. ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ವಿಚಾರವಾಗಿ ಮಾತನಾಡಿ, ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗುತ್ತಲೇ ಇರುತ್ತವೆ. ಹಾಗಂತ ನಾವು ಯಾವುದೇ ಪ್ರಕರಣವನ್ನು ನಿರ್ಲಕ್ಷ್ಯ ಮಾಡಿಲ್ಲ. ಅದು ಬೆಳಗಾವಿಯೇ ಆಗಲಿ, ಮಂಗಳೂರೇ ಆಗಲಿ. ಮೈದುನ ಮತ್ತು ಅತ್ತಿಗೆ ನಡುವೆ ನಡೆದ ಗಲಾಟೆಯನ್ನು ಅಂಗನವಾಡಿ ಕಾರ್ಯಕರ್ತೆ ಬಿಡಿಸಲು ಹೋಗಿದ್ದರು. ಈ ವೇಳೆ ಹಲ್ಲೆ ನಡೆದಿದೆ. ಇದು ಕೌಟುಂಬಿಕ ಕಲಹ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇದರ ಮಧ್ಯಸ್ಥಿಕೆ ವಹಿಸಲು ಹೋಗಿದ್ದ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ. ನಾನು ಅವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ. ಇದು ಕೌಟುಂಬಿಕ ಕಲಹ. ಆದ್ದರಿಂದ ಇದರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ಈ ಪ್ರಕರಣ ತನಿಖಾ ಹಂತದಲ್ಲಿದೆ. ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿ ಹೇಳಿಕೆ ನೀಡುವುದು ತಪ್ಪು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇದನ್ನೂ ಓದಿ :ಕ್ರಿಮಿನಲ್ ಪರವಾಗಿ ಆರ್ ಅಶೋಕ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ: ಶಾಸಕ ಪ್ರಸಾದ ಅಬ್ಬಯ್ಯ

ABOUT THE AUTHOR

...view details