ಕರ್ನಾಟಕ

karnataka

ಧಾರವಾಡ; ಸೀಲ್​ಡೌನ್ ಪ್ರದೇಶಕ್ಕೆ ಇನ್ಸಿಡೆಂಟ್‌ ಕಮಾಂಡರ್​ಗಳ ನೇಮಕ

By

Published : Jul 22, 2020, 1:35 AM IST

ಸೀಲ್‍ಡೌನ್ ಪ್ರದೇಶಕ್ಕೆ ಇನ್ಸಿಡೆಂಟ್‌ ಕಮಾಂಡರ್​ಗಳನ್ನು ನೇಮಿಸಲಾಗಿದೆ. ಸಾರ್ವಜನಿಕರು ತಮ್ಮ ಪ್ರದೇಶದ ಅಧಿಕಾರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ತಮ್ಮ ತೊಂದರೆಗಳನ್ನು ನಿವೇದಿಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

appointment of incident commander for seal-down area
appointment of incident commander for seal-down area

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸುಮಾರು 800ಕ್ಕೂ ಹೆಚ್ಚು ಸ್ಥಳಗಳಲ್ಲಿ ಸೀಲ್‍ಡೌನ್ ಮಾಡಲಾಗಿದೆ. ಹಾಗಾಗಿ ಪ್ರತಿ ಸೀಲ್‍ಡೌನ್ ಪ್ರದೇಶಕ್ಕೆ ಇನ್ಸಿಡೆಂಟ್‌ ಕಮಾಂಡರ್​ಗಳನ್ನು ನೇಮಿಸಲಾಗಿದೆ. ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಅಧಿಕಾರಿಗಳು ಸೀಲ್‍ಡೌನ್ ಪ್ರದೇಶದ ಪ್ರಾಥಮಿಕ ಸಂಪರ್ಕ ಹೊಂದಿದವರ ಮಾಹಿತಿ, ಗರ್ಭಿಣಿ, ಬಾಣಂತಿಯರು, ಮಕ್ಕಳು ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ಆರೋಗ್ಯದ ವ್ಯಕ್ತಿಗಳ ಮಾಹಿತಿ ಹೊಂದಿರುತ್ತಾರೆ. ಅವರ ದೂರವಾಣಿ ಸಂಖ್ಯೆಗಳನ್ನು www.supportdharwad.in ವೆಬ್‍ಪೋರ್ಟಲ್‍ನಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರು ತಮ್ಮ ಪ್ರದೇಶದ ಅಧಿಕಾರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ತಮ್ಮ ತೊಂದರೆಗಳನ್ನು ನಿವೇದಿಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details