ಧಾರವಾಡ: ಮುಖ್ಯಮಂತ್ರಿ ಸ್ಥಾನದ ಜೊತೆಗ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅವರ ಅಭಿಮಾನಿಗಳು ನಗರದ ಜುಬ್ಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡದ ಜುಬ್ಲಿ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಹಾಗೂ ಬೆಂಬಲಿಗರು, ಸಚಿವ ಸ್ಥಾನ ಕೈತಪ್ಪಿಸಲು ಹಿರಿಯ ನಾಯಕರು ಹುನ್ನಾರ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅರವಿಂದ್ ಬೆಲ್ಲದ್ ಬೆಂಬಲಿಗರಿಂದ ಪ್ರತಿಭಟನೆ ಶಾಸಕ ಅರವಿಂದ್ ಬೆಲ್ಲದ್ ಅವರು ದಕ್ಷ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಬೆಂಬಲಿಗರಿಗೆ ನೋವುಂಟು ಮಾಡಿದೆ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಲು ಯತ್ನಿಸಿದ ಬೆಂಬಲಿಗರು ಮತ್ತು ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಓದಿ:ಕಳೆದ 2 ವರ್ಷದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ: ಸುರೇಶ್ ಕುಮಾರ್