ಹುಬ್ಬಳ್ಳಿ:ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅವರ ಬೆಂಬಲಿಗರು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು.
ನವನಗರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಚೆನ್ನಮ್ಮ ವೃತ್ತದಲ್ಲಿ ಬೆಲ್ಲದ ಬೆಂಬಲಿಗರು ಅರವಿಂದ್ ಬೆಲ್ಲದ್ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದರು. ನಂತರ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.