ಹುಬ್ಬಳ್ಳಿ :ಮಹಾನಗರ ಪಾಲಿಕೆಯು 2021–22ನೇ ಸಾಲಿನಲ್ಲಿ ಅವಳಿ ನಗರಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಕಲ್ಪಿಸಲು ರೂಪಿಸಿದ್ದ 711 ಕೋಟಿ ರೂಪಾಯಿ ಮೊತ್ತದ ಬಜೆಟ್‌ಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಹು-ಧಾ ಮಹಾನಗರ ಪಾಲಿಕೆ ಚುನಾವಣೆ ನಡೆಯದ ಹಿನ್ನೆಲೆ ಪಾಲಿಕೆ ಸದಸ್ಯರು ಇಲ್ಲದೆ, ಈ ಬಾರಿ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದೆ. ಹಳೇ ಬಡಾವಣೆಗಳ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಪಾಲಿಕೆ ಮೂಲಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಿದ್ದು, ರಸ್ತೆ ನಿರ್ಮಾಣ, ಅಭಿವೃದ್ಧಿ ಮತ್ತು ಚರಂಡಿ ನಿರ್ಮಾಣಕ್ಕೆ ಸುಮಾರು 128 ಕೋಟಿ ರೂಪಾಯಿ ಮೀಸಲಿಟ್ಟಿದೆ.
ರಸ್ತೆಗಳ ವಿಸ್ತರಣೆ ಹಾಗೂ ಭೂ ಸ್ವಾಧೀನದ ಪರಿಹಾರಕ್ಕೆ ಪ್ರತ್ಯೇಕ 30 ಕೋಟಿ ರೂಪಾಯಿ ನಿಗದಿ ಮಾಡಿದೆ. ಪಾಲಿಕೆ ಸದಸ್ಯರು ಇಲ್ಲದಿರುವುದರಿಂದ ಪಾಲಿಕೆ ಅಧಿಕಾರಿಗಳೇ ಬಜೆಟ್ ಸಿದ್ಧಪಡಿಸಿದ್ದಾರೆ.