ಕರ್ನಾಟಕ

karnataka

By

Published : Jun 30, 2020, 5:45 PM IST

ETV Bharat / state

ಧಾರವಾಡ ಜಿಲ್ಲೆಯಲ್ಲಿ ಡಿಕೆಶಿ ಪದಗ್ರಹಣದ ನೇರಪ್ರಸಾರ ಕಾರ್ಯಕ್ರಮಕ್ಕೆ ವ್ಯವಸ್ಥೆ

ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪದಗ್ರಹಣ ಕಾರ್ಯಕ್ರಮ ಜರುಗಲಿದ್ದು, ಧಾರವಾಡ ಜಿಲ್ಲೆಯ ಹಲವು ಭಾಗಗಳಲ್ಲಿ ಪದಗ್ರಹಣ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅನಿಲ ಕುಮಾರ ಪಾಟೀಲ್​ ತಿಳಿಸಿದ್ದಾರೆ.

Arrangement for the live telecast
ಅನಿಲ ಕುಮಾರ ಪಾಟೀಲ

ಹುಬ್ಬಳ್ಳಿ:ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಪದಗ್ರಹಣ ಕಾರ್ಯಕ್ರಮ ಜುಲೈ 2 ರಂದು ಜರುಗಲಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಈ ಕಾರ್ಯಕ್ರಮದ ನೇರ ಪ್ರವಾಸ ಮಾಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ ಕುಮಾರ ಪಾಟೀಲ್​ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 7831 ಕಡೆಗಳಲ್ಲಿ ಪದಗ್ರಹಣ ಕಾರ್ಯಕ್ರಮದ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಧಾರವಾಡ ಜಿಲ್ಲೆಯ 60 ವಾರ್ಡ್​ಗಳಲ್ಲಿ, 143 ಗ್ರಾಮ ಪಂಚಾಯತ್​ಗಳಲ್ಲಿ, 5 ಪುರಸಭೆ, ಪಟ್ಟಣ ಪಂಚಾಯತಗಳಲ್ಲಿ ನೇರ ಪ್ರಸಾರದ ವೀಕ್ಷಣೆಗೆ ಸಿದ್ಧತೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದ ನೇರ ವೀಕ್ಷಣೆ ತಯಾರಿ ಕುರಿತು ಮಾಹಿತಿ

ಕಾರ್ಯಕ್ರಮ ವೀಕ್ಷಿಸಲು ಆಗಮಿಸುವ ವೀಕ್ಷಕರ ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯಕ್ರಮದ ಪ್ರಸಾರಕ್ಕೆ 477 ಕೋ-ಆರ್ಡಿನೇಟರ್​ಗಳನ್ನು ನೇಮಿಸಲಾಗಿದ್ದು, ಅವರಿಗೆ ಸಭೆ ನಡೆಸಲು ಜಿಪಿಎಸ್ ಟ್ರ್ಯಾಕರ್ ಅಳವಡಿಸಿ ಕಾರ್ಯಕ್ರಮ ಪ್ರಸಾರದಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details