ಕರ್ನಾಟಕ

karnataka

ETV Bharat / state

ಕಲಘಟಗಿ ಮಧುಮಗನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ವಿವಾಹೇತರ ಸಂಬಂಧವೇ ಹತ್ಯೆಗೆ ಕಾರಣ - ಈಟಿವಿ ಭಾರತ ಕನ್ನಡ

ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಯುವಕನನ್ನು ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು

By

Published : Jun 5, 2023, 12:48 PM IST

ಹುಬ್ಬಳ್ಳಿ:ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವಾಹಿತ ಮಹಿಳೆ ಜೊತೆ ಯುವಕ ಹೊಂದಿದ್ದ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈಯ್ಯಲಾಗಿತ್ತು.

ಈ ಪ್ರಕರಣ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಇದೇ 7ರಂದು ಯುವಕ ಹಸೆಮಣೆ ಏರಬೇಕಿದ್ದ.‌ ಅಷ್ಟರಲ್ಲಿ ಯುವಕನ ಕೊಲೆ ನಡೆದಿತ್ತು. ಬಳಿಕ ಪ್ರಕರಣದ ತನಿಖೆ ನಡೆಸಿದ ಕಲಘಟಗಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ಕೊಲೆಗೆ ಕಾರಣವನ್ನು ಸಹ ಬಯಲು ಮಾಡಿದ್ದಾರೆ.

ಮೃತ ಯುವಕ ಜಿನ್ನೂರು ಗ್ರಾಮದ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ. ಇದನ್ನು ತಿಳಿದು ಮಹಿಳೆಯ ಪತಿ ಮತ್ತು ಸಹೋದರ ಕೊಲೆ ಮಾಡಿದ್ದಾರೆ. ಮಹಿಳೆಯ ಪತಿ ಮುತ್ತಪ್ಪ ಹುಲ್ಲೊಳ್ಳಿ,‌ ಸಹೋದರ ವೀರಭದ್ರಪ್ಪ ಜಾಲಿಹಾಳನನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಎರಡು ದಿನಗಳಲ್ಲಿಯೇ ಇನ್ಸ್‌ಪೆಕ್ಟರ್ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ‌‌ಯಶಸ್ವಿಯಾಗಿದೆ.

ಸಹೋದರಿಯರಿಬ್ಬರ ಆತ್ಮಹತ್ಯೆ:ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಭೂಮಿಕಾ ಹಡಪದ (19) ಮತ್ತು ಕಾವೇರಿ ಹಡಪದ (17) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಮನೆಯಲ್ಲಿ ಯಾರು ಇಲ್ಲದ ವೇಳೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕಲಘಟಗಿಯ ಬೆಂಡಿಗೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ‌‌ ಕೆಲಸಕ್ಕೆಂದು ಹೋದ ವೇಳೆ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಇಬ್ಬರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಬಾರ್​ ಮುಚ್ಚುವ ಸಮಯವಾಯ್ತು ಅಂದದಷ್ಟೇ.. ಶಿವಮೊಗ್ಗದಲ್ಲಿ ಪೊಲೀಸರ ಮುಂದೆಯೇ ಕ್ಯಾಷಿಯರ್ ಕೊಲೆ!

ಪತ್ನಿ ಮಗ ಸೇರಿ ಗಂಡನ ಕೊಲೆ:ಬೆಳಗಾವಿಯಲ್ಲಿ ನಡೆದ ಘಟನೆಯೊಂದರಲ್ಲಿಕುಡುಕ ಗಂಡನ ಕಾಟಕ್ಕೆ ಬೇಸತ್ತ ಪತ್ನಿ ತನ್ನ ಮಗನೊಂದಿಗೆ ಪತಿಯನ್ನೇ ಹತ್ಯೆ ಮಾಡಿದ್ದಾಳೆ. ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಚಂದ್ರಕಾಂತ ಮಾವರಕರ್​ರನ್ನು ಕೊಲೆ ಮಾಡಲಾಗಿದೆ.

ಗ್ರಾಮದಲ್ಲಿ ಜಾತ್ರಿ ವೇಳೆ ಚಂದ್ರಕಾಂತ ಮದ್ಯ ಸೇವಿಸಿ ತನ್ನ ಪತ್ನಿ ಜತೆ ಜಗಳ ಮಾಡಿದ್ದ. ಈ ವೇಳೆ ಪತ್ನಿ, ಮಗ ಮತ್ತು ಪತಿಯ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಇದರಂದ ಕೋಪಗೊಂಡ ಸಾವಿತ್ರಿ ಹಾಗೂ ಮಗ ಸುನೀಲ್ ರಾಡ್​​​ನಿಂದ ಚಂದ್ರಕಾಂತ ತಲೆಗೆ ಹೊಡೆದಿದ್ದರು. ಬಳಿಕ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಚಂದ್ರಕಾಂತನನ್ನು ಸ್ಥಳೀಯರೆಲ್ಲಾ ಸೇರಿ ಮೂಡಲಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೇ ಚಂದ್ರಕಾಂತ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ಹುಬ್ಬಳ್ಳಿ : ತಾಯಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಶರಣಾದ ಸಹೋದರಿಯರು

ABOUT THE AUTHOR

...view details