ಹುಬ್ಬಳ್ಳಿ: ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬಿಸಿ ಊಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರು ಉಪವಾಸ ಸತ್ಯಾಗ್ರಹ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಉಪವಾಸ ಸತ್ಯಾಗ್ರಹ - Asha activists
ನವಲಗುಂದದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಸುವಂತೆ ಮತ್ತು ಮಾರ್ಚ್ನಿಂದ ಇಲ್ಲಿಯವರೆಗಿನ ಸಂಬಳವನ್ನು ನೀಡುವಂತೆ ಒತ್ತಾಯಿಸಿದ್ದಾರೆ.
ನವಲಗುಂದದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಕಾರ್ಯಕರ್ತೆಯರು, ತಮ್ಮ ಬೇಡಿಕೆ ಈಡೇರಿಸುವಂತೆ ಮತ್ತು ಮಾರ್ಚ್ನಿಂದ ಇಲ್ಲಿಯವರೆಗಿನ ಸಂಬಳವನ್ನು ನೀಡುವಂತೆ ಒತ್ತಾಯಿಸಿದರು.
ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ನಾಲ್ಕು ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಈಗಾಗಲೇ ಏಪ್ರಿಲ್ ತಿಂಗಳಿಂದ ಮುಖ್ಯಮಂತ್ರಿ, ಶಿಕ್ಷಣ ಇಲಾಖೆಯ ಸಚಿವರು, ಮುಖ್ಯಮಂತ್ರಿ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಂಟಿ ನಿರ್ದೇಶಕಿಗೆ ಮನವಿಯನ್ನು ಸಲ್ಲಿಸಲಾಗಿದ್ದು, ಯಾವುದೇ ಉತ್ತರ ನೀಡಿಲ್ಲ. ಆದಷ್ಟು ಬೇಗ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಅಲ್ಲಿಯವರಿಗೆ ಉಪಹಾಸ ಸತ್ಯಾಗ್ರಹ ಮುಂದುವರೆಸುವುದಾಗಿ ಪಟ್ಟು ಹಿಡಿದಿದ್ದಾರೆ.