ಧಾರವಾಡ : ಮಾಸಿಕ ಕನಿಷ್ಠ 12 ಸಾವಿರ ಗೌರವ ಧನ ನಿಗದಿ ಮಾಡಿ, ಅಗತ್ಯವಿರುವ ಸುರಕ್ಷತಾ ಸಾಮಗ್ರಿಗಳನ್ನು ಒದಗಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ ನಡೆಸಿತು.
ಕನಿಷ್ಠ 12 ಸಾವಿರ ಗೌರವಧನ ನಿಗದಿಗೆ ಆಗ್ರಹ : ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - dharwad latest news
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇದೇ ವೇಳೆ, ಜಿಲ್ಲಾಧಿಕಾಗಳ ಮೂಲಕ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರು ಕೋವಿಡ್ ವಿರುದ್ದ ಸಹ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಸುರಕ್ಷತಾ ಸಾಮಗ್ರಿಗಳನ್ನು ವಿತರಣೆ ಮಾಡಿಲ್ಲ. ನಮ್ಮ ಬಹಳ ದಿನಗಳ ಬೇಡಿಕೆ 12 ಸಾವಿರ ರೂ. ಕನಿಷ್ಠ ವೇತನ ನೀಡಬೇಕು. ಜೊತೆಗೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆಯೂ ಆಗ್ರಹಿಸಿದರು.