ಧಾರವಾಡ:ಗ್ಯಾಸ್ ಏಜೆನ್ಸಿ ಕಚೇರಿಗೆ ನುಗ್ಗಿ ಯುವಕರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡದ ಡಿಹೆಚ್‌ಎ ಕಚೇರಿ ಎದುರು ಈ ಘಟನೆ ನಡೆದಿದೆ.
ಹಲ್ಲೆ ಮಾಡಲು ಹೋದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರತ್ನ ನರಗುಂದ, ಹಲ್ಲೆಗೊಳಗಾದ ಮಹಿಳೆ. ಭರತ ಮತ್ತು ಮಂಜುನಾಥ ಹಲ್ಲೆ ಮಾಡಿದ ಆರೋಪಿಗಳು. ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ಮಹಿಳೆ ಜತೆ ಜಗಳ ವಿಕೋಪಕ್ಕೆ ಹೋಗಿ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.