ಹುಬ್ಬಳ್ಳಿ:ಸರಳವಾಸ್ತು ಸಂಸ್ಥಾಪಕ ಹಾಗೂ ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ನಗರದ ಉಣಕಲ್ ಬಳಿಯ ಖಾಸಗಿ ಹೋಟೆಲ್ನಲ್ಲಿ ಕಗ್ಗೊಲೆ ಮಾಡಲಾಗಿದೆ. ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಇಂದು ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಖಾಸಗಿ ಹೋಟೆಲ್ನ ರಿಸೆಪ್ಷನ್ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿದೆ.
ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಮೊದಲು ಕಾಲಿಗೆ ನಮಸ್ಕರಿಸಿ ಬಳಿಕ ಚಾಕುವಿನಿಂದ ಅನೇಕ ಬಾರಿ ಇರಿದಿದ್ದಾರೆ. ಹೊಟ್ಟೆ ಹಾಗೂ ಎದೆಯ ಭಾಗಕ್ಕೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿದ್ದಾರೆ. ಗುರೂಜಿಯವರು ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.