ಧಾರವಾಡ:ಚಾಲಕರಿಗೆ ಸಹಾಯಧನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾನಿರತ ಆಟೋ ಚಾಲಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ 7.75 ಲಕ್ಷ ಆಟೋ ಚಾಲಕರಿದ್ದು, 2.25 ಲಕ್ಷ ಮಂದಿ ಸಹಾಯಧನಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. 25 ಸಾವಿರ ಜನರಿಗೆ ಮಾತ್ರ ಹಣ ಬಂದಿದೆ. ಉಳಿದವರಿಗೂ ಶೀಘ್ರವಾಗಿ ಸಹಾಯಧನ ಬಿಡುಗಡೆ ಮಾಡಿ ಎಂದು ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸರ್ಕಾರ ಸಹಾಯಧನ ನೀಡಲು ಹಲವಾರು ದಾಖಲೆಗಳನ್ನು ಕೇಳುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದೆ. ಈ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.