ಹುಬ್ಬಳ್ಳಿ:ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿ 9ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಬೇಕಿದ್ದ ಬೃಹತ್ ಕಟ್ಟಡ, ಅನುದಾನದ ಕೊರತೆಯಿಂದಾಗಿ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ.
ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಸರ್ಕಾರದ ನಿರ್ಲಕ್ಷ್ಯತನದಿಂದ ಐದು ವರ್ಷದಿಂದ ಕಟ್ಟಡದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನ ಬಿಡುಗಡೆಯಾಗಿತ್ತು.
ಹುಬ್ಬಳ್ಳಿಯ ಪಡದಯ್ಯನ ಹಕ್ಕಲದಲ್ಲಿ ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಆಂಜನೇಯ ಭೂಮಿ ಪೂಜೆ ಮಾಡಿ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೇ ಸರ್ಕಾರದಿಂದ ಕಟ್ಟಡದ ಕಾಮಗಾರಿ ಮಾಡಿದ ಗುತ್ತಿಗೆದಾರನಿಗೆ ಹಣ ಬಿಡುಗಡೆಯಾಗಿರಲಿಲ್ಲ. ಅದೇ ಕಾರಣಕ್ಕೆ ಗುತ್ತಿಗೆದಾರ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರು.