ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮತ್ತು ಕಲಂ 35ಎ ರದ್ದುಪಡಿಸಿರುವ ದೇಶಾದ್ಯಂತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಆ.15ರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ನಗರದ ವಿಮಾನ ನಿಲ್ದಾಣದಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಉಗ್ರರಿಂದ ವಿಧ್ವಂಸಕ ಕೃತ್ಯ ಸಾಧ್ಯತೆ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್...! - ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್
ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮತ್ತು ಕಲಂ 35ಎ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಹಾಗೂ ಆ.15ರ ಸ್ವಾತಂತ್ರ್ಯೋತ್ಸವ ಅಂಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದರಿಂದ ಉಗ್ರರು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಗಳಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಕೆಎಸ್‌ಐಎಸ್‌ಎಫ್ ಹಾಗೂ ಭದ್ರತಾ ಸಿಬ್ಬಂದಿ ಭಾರಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.
ನಿಲ್ದಾಣ ಪ್ರವೇಶಿಸುವ ಪ್ರತಿ ವಾಹನಗಳನ್ನು ಪೊಲೀಸರು ಮುಖ್ಯ ಪ್ರವೇಶದ್ವಾರ ಬಳಿಯೇ ತಡೆದು, ಬಾಂಬ್ ಪತ್ತೆ ಯಂತ್ರಯೊಂದಿಗೆ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ. ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.