ಹುಬ್ಬಳ್ಳಿ :ಮೂರುಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಿರುವ ಹಿನ್ನೆಲೆ ಶ್ರೀಮಠಕ್ಕೆ ಭೇಟಿ ನೀಡಿದ ಪೊಲೀಸರು ಭದ್ರತೆ ದೃಷ್ಟಿಯಿಂದ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಿದರು.
ಹುಬ್ಬಳ್ಳಿ ಮೂರುಸಾವಿರ ಮಠ ಉತ್ತರಾಧಿಕಾರಿ ವಿವಾದ: ಪೊಲೀಸ್ ಇಲಾಖೆಯಿಂದ ಭದ್ರತೆ ಪರಿಶೀಲನೆ
ಮೂರುಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಿರುವ ಹಿನ್ನೆಲೆ ಶ್ರೀಮಠಕ್ಕೆ ಭೇಟಿ ನೀಡಿದ ಪೊಲೀಸರು ಭದ್ರತೆ ದೃಷ್ಟಿಯಿಂದ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಿದರು.
ಐಎಸ್ಡಿ ಹು-ಧಾ ಇನ್ಸ್ಪೆಕ್ಟರ್ ಶ್ರೀಶೈಲ ಬ್ಯಾಕೋಡ್ ಹಾಗೂ ಗುಪ್ತದಳ ಹು-ಧಾ ವಿಭಾಗದ ಇನ್ಸ್ಪೆಕ್ಟರ್ ಅಮೋಲ್ ಕಾಳೆ ನೇತೃತ್ವದಲ್ಲಿ ಸಿಬ್ಬಂದಿ ಶ್ರೀಮಠಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿತು. ದುರಸ್ಥಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾಗಳನ್ನು ಸರಿಪಡಿಸುವಂತೆ ಕಮರಿಪೇಟೆ ಠಾಣೆ ಇನ್ಸ್ಪೆಕ್ಟರ್ ಬಸವರಾಜ ಬುದ್ನಿ ಅವರಿಗೆ ಸೂಚಿಸಿದ್ದಾರೆ.
ಭಾನುವಾರ ಮೂರುಸಾವಿರ ಮಠದ ಉತ್ತರಾಧಿಕಾರಿ ಕುರಿತಂತೆ ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳು ಆಹ್ವಾನ ನೀಡಿದ್ರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆ ಇದೆ. ಪರ ಹಾಗೂ ವಿರೋಧ ವ್ಯಕ್ತವಾಗುವ ಸಾಧ್ಯತೆ ಹೆಚ್ಚಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ವಹಿಸಿದೆ.