ಹುಬ್ಬಳ್ಳಿ:ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ 40 ವಸಂತಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 30ರಿಂದ ವರ್ಷವಿಡೀ ಅವರ ಸೇವೆಯನ್ನು ಸಮಾಜಕ್ಕೆ ಪರಿಚಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಲ್ಯಾಮಿಂಗ್ಟನ್ ಸ್ಕೂಲ್ ಮುಖ್ಯಸ್ಥ ಎಂ ಬಿ ನಾತು ಹೇಳಿದರು.
4 ದಶಕದಿಂದ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ.. ವಿಶಿಷ್ಟ ಕಾರ್ಯಕ್ರಮಗಳು - ಸಮಾಜ ಸೇವೆ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಬಸವರಾಜ ಹೊರಟ್ಟಿ ಹಿತೈಷಿಗಳ ಬಳಗದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ..
ಲ್ಯಾಮಿಂಗ್ಟನ್ ಸ್ಕೂಲ್ ಮುಖ್ಯಸ್ಥ ಎಂ.ಬಿ.ನಾತು
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಬಸವರಾಜ ಹೊರಟ್ಟಿ ಹಿತೈಷಿಗಳ ಬಳಗದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
1980ರ ಜೂನ್ 30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಇದೇ ಜೂನ್ 30ಕ್ಕೆ ನಲವತ್ತು ವರ್ಷ ಪೂರ್ಣಗೊಳ್ಳಲಿದೆ ಎಂದರು.