ಕರ್ನಾಟಕ

karnataka

ETV Bharat / state

ಅಮಿತ್​ ಶಾಗೆ ಮಹದಾಯಿ ಸಮಸ್ಯೆ ಇತ್ಯರ್ಥಕ್ಕಾಗಿ ಮನವಿ ಸಲ್ಲಿಸಲು ಸಿದ್ಧ.. ಎಂಎಲ್‌ಸಿ ಹೊರಟ್ಟಿ - Latest Press Meet In Mahadayi

ಮನವಿ ಪತ್ರ ಸಲ್ಲಿಸಲು ಅನುಮತಿ ಕೊಡದಿದ್ರೆ ಮಹದಾಯಿ ಹೋರಾಟ ಸಮಿತಿ ಯಾವುದೇ ರೀತಿಯ ಪ್ರತಿಭಟನೆ ನಡೆಸೋದಿಲ್ಲ. ಎರಡು ರಾಜ್ಯದಲ್ಲಿ ಬಿಜೆಪಿ ಆಡಳಿದಲ್ಲಿರುವುದರಿಂದ ಮನವಿ ಪತ್ರದಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಉಲ್ಲೇಖಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

basavaraj-horatti
ವಿಧಾನ‌ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ

By

Published : Jan 17, 2020, 4:54 PM IST

ಹುಬ್ಬಳ್ಳಿ: ಕಳಸಾ ಬಂಡೂರಿ ಮಹದಾಯಿ ಸಮಸ್ಯೆ ಬಗೆ ಹರಿಸುವಂತೆ ಅಮಿತ್​ ಶಾಗೆ ಮನವಿ ಸಲ್ಲಿಸುತ್ತೇವೆ ಎಂದು ವಿಧಾನ‌ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ‌ಅವರು, ನಾಳೆ ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ ಸಮಾವೇಶದಲ್ಲಿ ಭಾಗಿಯಾಗಲು‌ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಹದಾಯಿ ಹೋರಾಟ ಸಮಿತಿಯಿಂದ ‌ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲು ಸಿದ್ದವಾದ್ದೇವೆ. ಮನವಿ ಸಲ್ಲಿಸಲು ಪೊಲೀಸ್ ಆಯುಕ್ತರು ಅವಕಾಶ ಮಾಡಿ ಕೊಡಬೇಕು ಎಂದರು.

ವಿಧಾನ‌ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ..

ಮನವಿ ಪತ್ರ ಸಲ್ಲಿಸಲು ಅನುಮತಿ ಕೊಡದಿದ್ರೆ ಮಹದಾಯಿ ಹೋರಾಟ ಸಮಿತಿ ಯಾವುದೇ ರೀತಿಯ ಪ್ರತಿಭಟನೆ ನಡೆಸೋದಿಲ್ಲ. ಎರಡು ರಾಜ್ಯದಲ್ಲಿ ಬಿಜೆಪಿ ಆಡಳಿದಲ್ಲಿರುವುದರಿಂದ ಮನವಿ ಪತ್ರದಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಉಲ್ಲೇಖಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details