ಹುಬ್ಬಳ್ಳಿ: ಸೆ.3 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ, ನಾನು ಏನನ್ನು ಮಾತನಾಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಭೇಟಿಗೆ ಪ್ರತಿಪಕ್ಷಗಳ ನಿಯೋಗ ಮುಂದಾಗಿರುವ ಕುರಿತು ಹುಬ್ಬಳ್ಳಿಯ ತಮ್ಮ ನಿವಾಸದ ಎದುರು ಪ್ರತಿಕ್ರಿಯಿಸಿದ ಅವರು, ಆ ವಿಷಯ ಸದ್ಯಕ್ಕೆ ನ್ಯಾಯಾಲಯದಲ್ಲಿದೆ, ಪ್ರಧಾನಿ ಭೇಟಿಗೆ ಪ್ರತಿಪಕ್ಷದವರಿಗೆ ಅವಕಾಶವಿದೆ, ಹಾಗಾಗಿ ಅವರು ಭೇಟಿ ಮಾಡಲಿ ಎಂದರು.
ಹುಬ್ಬಳ್ಳಿಯ ತಮ್ಮ ನಿವಾಸದ ಎದುರು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಇನ್ನು ಗಣೇಶ ಚತುರ್ಥಿ ಆಚರಣೆ ಮಾಡುವ ಕುರಿತು ಬಸನಗೌಡ ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ಈ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರನ್ನೇ ಕೇಳಿ ಎಂದು ತಿಳಿಸಿದರು.
ಸಿಎಂ ನಿವಾಸದಲ್ಲಿ ರಕ್ಷಾ ಬಂಧನ ಸಂಭ್ರಮ:
ಹುಬ್ಬಳ್ಳಿಯ ಸಿಎಂ ನಿವಾಸದಲ್ಲಿ ರಕ್ಷಾ ಬಂಧನ ಸಂಭ್ರಮ ಕಳೆಗಟ್ಟಿತ್ತು. ಬಸವರಾಜ ಬೊಮ್ಮಾಯಿಗೆ ಸಹೋದರಿಯರು ರಾಕಿ ಕಟ್ಟಿದರು. ನಂತರ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ಸಹೋದರಿಯರು ಕೂಡ ರಾಖಿ ಕಟ್ಟಿ, ರಕ್ಷಾ ಬಂಧನದ ಶುಭಾಶಯ ತಿಳಿಸಿದರು. ನಂತರ ಸಿಎಂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.