ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಪಶ್ಚಿಮ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಿವಶಂಕರ ಚನ್ನಪ್ಪ ಕಲ್ಲೂರ ಸ್ಪರ್ಧಿಸಿದ್ದು, ಇವರ ಗೆಲುವು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಶಿವಶಂಕರ ಚನ್ನಪ್ಪ ಕಲ್ಲೂರ ಗೆಲುವು ಖಚಿತ: ಬಸವರಾಜ ಹೊರಟ್ಟಿ ವಿಶ್ವಾಸ - Basavaraja horatti
ಈಗಾಗಲೇ ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳು ನನ್ನನ್ನು ಸಂಪರ್ಕಿಸಿದ್ದಾರೆ. ಬೆಂಬಲ ಸೂಚಿಸುವಂತೆ ನನಗೆ ಮನವಿಯನ್ನೂ ಮಾಡಿದ್ದಾರೆ. ಆದರೆ, ನಾನು ನಮ್ಮ ಪಕ್ಷದ ಅಭ್ಯರ್ಥಿ ಶಿವಶಂಕರ ಕಲ್ಲೂರರನ್ನು ಬೆಂಬಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಚುನಾವಣೆಗೆ ಇಂದಿನಿಂದ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತಿದೆ. ನಮ್ಮ ಅಭ್ಯರ್ಥಿ ಗೆಲುವಿಗಾಗಿ ಪ್ರಾಮಾಣಿಕವಾದ ಪ್ರಯತ್ನ ನಡೆಸಿದ್ದೇವೆ. ಈಗಾಗಲೇ ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳು ನನ್ನನ್ನು ಸಂಪರ್ಕ ಮಾಡಿದ್ದಾರೆ. ಬೆಂಬಲ ಸೂಚಿಸುವಂತೆ ನನಗೆ ಮನವಿಯನ್ನೂ ಮಾಡಿದ್ದಾರೆ. ಆದರೆ, ನಾನು ನಮ್ಮ ಪಕ್ಷದ ಅಭ್ಯರ್ಥಿ ಶಿವಶಂಕರ ಕಲ್ಲೂರ ಅವರಿಗೆ ಬೆಂಬಲಿಸುತ್ತೇನೆ ಎಂದರು.
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಅವರು ಪದವೀಧರರಿಗಾಗಿ ಈವರೆಗೆ ಏನು ಮಾಡಿದ್ದಾರೆ? ಅನ್ನೋದನ್ನು ಮೊದಲು ಬಹಿರಂಗಪಡಿಸಲಿ. ಈ ಕುರಿತು ಬಹಿರಂಗ ವೇದಿಕೆ ಮೇಲೆ ನಾವು ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದರು. ನಾವು ಈವರೆಗೂ ಯಾರ ನಂಬಿಕೆಯನ್ನು ಕಳೆದುಕೊಂಡಿಲ್ಲ. ಅದೇ ನಂಬಿಕೆಯ ಮೇಲೆ ನಾವು ಈಗ ಪದವೀಧರರ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.