ಹುಬ್ಬಳ್ಳಿ :ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಮಾಡಲು ಮುಂದಾಗಿವೆ. ವರ್ಗಾವಣೆಗಳಾಗುವುದು ಸಹಜ, ಅವರು ಮಾಡುತ್ತಿರುವ ಆರೋಪಗಳಿಗೆ ದಾಖಲೆಗಳಿದ್ದರೆ ಕೊಡಲಿ. ರಾಜಕಾರಣಕ್ಕಾಗಿ ಹೇಳಿಕೆ ನೀಡಬಾರದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿರುಗೇಟು ಕೊಟ್ಟರು.
ನಗರದಲ್ಲಿಂದು ಮಾತನಾಡಿ, ಕೃಷಿ ಸಚಿವ ಚಲುವನಾರಾಯಣಸ್ವಾಮಿ ವಿರುದ್ದ ಲಂಚ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ಕೊಡಲಾಗಿದೆ ಎಂದರು. ಪೆಂಡ್ರೈವ್ ಬಗ್ಗೆ ಮಾತನಾಡಿ, ಒಂದು ಸಾಕ್ಷಿಗಳನ್ನೂ ಕೊಡಲಿಲ್ಲ. ಮಾಧ್ಯಮಗಳ ಮುಂದೆ ಕೂಡ ಬಹಿರಂಗಪಡಿಸಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಜನಪರ ಕೆಲಸ ಮಾಡುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಉತ್ತಮ ಕೆಲಸಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಹಾನಿಯುಂಟು ಮಾಡಲು ಅವರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಳೆದ ಬಾರಿಯೂ ಕೂಡ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ಆರೋಪಗಳನ್ನು ಮಾಡಿದ್ದು ವರ್ಕೌಟ್ ಆಗಿರಲಿಲ್ಲ. ಈ ಬಾರಿಯೂ ಅದೇ ರೀತಿ ಮಾಡುತ್ತಿದ್ದು, ವರ್ಕೌಟ್ ಆಗುವುದಿಲ್ಲ. ಜನರು ತುಂಬಾ ಹತ್ತಿರದಿಂದ ಗಮನಿಸುತ್ತಿದ್ದಾರೆ. ಮತ್ತೆ ಪಾಠ ಕಲಿಸುತ್ತಾರೆ ಎಂದು ಹರಿಹಾಯ್ದರು.
ಇದನ್ನೂ ಓದಿ :ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಕೇಸ್; ಗುತ್ತಿಗೆದಾರರಿಗೆ ಕಮಿಷನ್ ಬೇಡಿಕೆ ವಿರುದ್ಧ ಬಿಜೆಪಿ ಹೋರಾಟ: ಅಶ್ವತ್ಥ್ ನಾರಾಯಣ್