ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸಿಬಿಐ ಸಾಂವಿಧಾನಿಕ ಸಂಸ್ಥೆಯಾಗಿದೆ. ಹೀಗಾಗಿ, ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ. ಅವರನ್ನು ತನಿಖೆ ಮಾಡಲು ಸುಮ್ಮನೆ ಬಿಡಬೇಕು. ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿ, ಉಪ ಚುನಾವಣೆಯಲ್ಲಿ ಜಾತಿ ರಾಜಕಾರಣ ಮಾಡಿದ ಅವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.