ಧಾರವಾಡ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೃಹತ್ ಪ್ರತಿಭಟನ ಮೆರವಣಿಗೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಲಾ ಶಿಕ್ಷಕರಿಂದ ಪ್ರತಿಭಟನೆ - ಬೃಹತ್ ಪ್ರತಿಭಟನ ಮೆರವಣಿಗೆ
ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ನಗರದ ನೌಕರರ ಸಂಘದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಆಲೂರು ವೆಂಕಟರಾವ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಸೇರಿತು. ಅಲ್ಲಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ಬಂದು ಪ್ರತಿಭಟನಾ ಮೆರವಣಿಗೆ ಮುಕ್ತಾಯಗೊಂಡಿತು.
ಬೆಳಗಾವಿ ವಿಭಾಗದಲ್ಲಿ ಅಮಾನತುಗೊಂಡಿರೋ ಶಿಕ್ಷಕರನ್ನು ಕೆಲಸಕ್ಕೆ ಮರು ನಿಯೋಜನೆಗೊಳಿಸುವುದು. ತಡೆ ಹಿಡಿಯಲಾಗಿರುವ ವೇತನ ಬಡ್ತಿ ಕೊಡುವುದು. ಬೆಳಗಾವಿ ವಿಭಾಗ ಮಟ್ಟದ ಎಲ್ಲಾ ಅಮಾನತು ಪ್ರಕರಣಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಭಯಮುಕ್ತ ಕಲಿಕಾ ವಾತಾವರಣ ನಿರ್ಮಾಣವಾಗಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.