ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಜೋಡಣೆ ಸೇರಿದಂತೆ ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ನರಗುಂದ ಮತ್ತು ನವಲಗುಂದದಲ್ಲಿ ನಡೆದಿರುವ ರೈತ ಹೋರಾಟ 2250ನೇ ದಿನ ಪೂರೈಸಿದೆ. ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹಿಸಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಯಲಿದೆ.
ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ - Hubli Farmer Protest
ಕಳಸಾ-ಬಂಡೂರಿ ನಾಲಾ ಜೋಡಣೆ ಸೇರಿದಂತೆ ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ನಡೆದಿರುವ ರೈತ ಹೋರಾಟ 2250ನೇ ದಿನ ಪೂರೈಸಿದ್ದು,ಈ ಯೋಜನೆ ಸಮರ್ಪಕ ಜಾರಿಗೆ ಆಗ್ರಹಿಸಿ ಇಂದು ಬೆಂಗಳೂರು ಚಲೋ ಪ್ರತಿಭಟನೆಗೆ ನಿರ್ಧರಿಸಲಾಗಿದೆ.
ಇಂದು ಬೆಂಗಳೂರು ಚಲೋ
ನವಲಗುಂದ, ನರಗುಂದ ಮತ್ತು ಇತರ ಭಾಗದ 30ಕ್ಕಿಂತ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಯೋಜನೆ ಶೀಘ್ರ ಮತ್ತು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ.
Last Updated : Oct 5, 2021, 12:18 PM IST