ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ನೆರೆ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಇದರ ದುರುಪಯೋಗವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಸೂಚನೆ ನೀಡಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನೆರೆ ಕಾಮಗಾರಿಗಳ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದಿಂದ ನೆರೆಯಲ್ಲಿ ಸೂರು ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುತ್ತಿದೆ. ಇದು ಅತಿ ಹೆಚ್ಚಿನ ಮೊತ್ತವಾಗಿದ್ದು, ಈಗಾಗಲೇ ಮೊದಲ ಕಂತಿನ ಹಣ ಪಡೆದವರು ಮನೆ ನಿರ್ಮಾಣ ಕಾರ್ಯ ಪ್ರಾರಂಭಿಸಿರುವುದನ್ನು ಖಾತ್ರಿ ಪಡಿಸಿಕೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.