ಧಾರವಾಡ: ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆಯ ಉಳವಿ ಬಸವೇಶ್ವರ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ.
ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಸಾವು ಇಬ್ಬರ ಸ್ಥಿತಿ ಗಂಭೀರ - person died in dharwad
ಧಾರವಾಡ ಜಿಲ್ಲೆಯ ಉಳವಿ ಬಸವೇಶ್ವರ ದೇವಸ್ಥಾನದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಸಾವು ಇಬ್ಬರು ಗಂಭೀರ
ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಹಾಗೂ ಗಾಯಾಳುಗಳ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳಿಗೆ ನೀರು ಕುಡಿಸಿ ಮಾನವೀಯತೆ ಮೆರೆದಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.