ಧಾರವಾಡ:ಕಬ್ಬಿನ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.
ಕಲಘಟಗಿ ತಾಲೂಕಿನ ಹುಲಕೊಪ್ಪ ಗ್ರಾಮದ ಯುವಕ ಸೈಯದ್ ರೆಹಮಾನ್ ಬಳಿಗೇರ ಮೃತ ದುರ್ದೈವಿಯಾಗಿದ್ದಾನೆ. ಹುಲಕೊಪ್ಪ ಗ್ರಾಮದಿಂದ ಧಾರವಾಡದ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.