ಹುಬ್ಬಳ್ಳಿ:ಮೊಬೈಲ್ನಲ್ಲಿ ಮಾತನಾಡುತ್ತಾ ಹೊರಟಿದ್ದ ಬೈಕ್ ಸವಾರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು - ಹುಬ್ಬಳ್ಳಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದ ಬೈಕ್
ಮೊಬೈಲ್ನಲ್ಲಿ ಮಾತನಾಡುತ್ತಾ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
man died on the spot at Hubli
ನೀಲಪ್ಪ ಮಾದರ ಎಂಬುವರಿಗೆ ಸೇರಿದ ಬೈಕ್ ತೆಗೆದುಕೊಂಡು ಬಂದಿದ್ದ ವ್ಯಕ್ತಿ ಮೊಬೈಲ್ನಲ್ಲಿ ಮಾತನಾಡುತ್ತಾ ಬರುತ್ತಿದ್ದನು. ಮಾತನಾಡುವುದರಲ್ಲಿ ಮಗ್ನನಾಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.