ಧಾರವಾಡ:ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಗರಗ ಗ್ರಾಮದ ಬಳಿ ನಡೆದಿದೆ.
ಲಾರಿ-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು - Accident news
ಧಾರವಾಡದ ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ-ಬೈಕ್ ನಡುವೆ ಭೀಕರ ಅಪಘಾತ...ಬೈಕ್ ಸವಾರ ಸ್ಥಳದಲ್ಲೇ ಸಾವು
ಅಪಘಾತದಲ್ಲಿ ಗರಗ ಗ್ರಾಮದ ಪ್ರಕಾಶ ಸಂಗೊಳ್ಳಿ (44) ಎಂಬಾತ ಅಸುನೀಗಿದ್ದಾನೆ. ಧಾರವಾಡದ ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ರಕ್ತಸ್ರಾವವಾಗಿ ಪ್ರಕಾಶ್ ಸ್ಥಳದಲ್ಲೇ ಸಾವನ್ನ ಪ್ಪಿದ್ದಾನೆ.