ಹುಬ್ಬಳ್ಳಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಎಲ್ಲ ಅರ್ಹತೆಗಳನ್ನು ಕಳೆದುಕೊಂಡಿದೆ. ಒಂದು ಕ್ಷಣವೂ ಬಿಜೆಪಿಗೆ ಅಧಿಕಾರದಲ್ಲಿರುವ ನೈತಿಕತೆಯಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ವಾಗ್ದಾಳಿ ನಡೆಸಿದ್ದಾರೆ.
ಭ್ರಷ್ಟ ಬೊಮ್ಮಾಯಿ ಸರ್ಕಾರ..ನಗರದ ವಿಮಾನನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರದ ಸಮುದ್ರದಲ್ಲಿ ಮುಳುಗಿ ಹೋಗಿದೆ. ಪ್ರಜಾಪ್ರಭುತ್ವದ ಮೌಲ್ಯವನ್ನು ಗಾಳಿಗೆ ತೂರಿದ ಬಿಜೆಪಿಯದ್ದು ಅನೈತಿಕ ಸರ್ಕಾರ. ಎರಡೂ ಕೈಯಲ್ಲಿ ಲಂಚ ತೆಗೆದುಕೊಳ್ಳುತ್ತ ಬಿಜೆಪಿ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ. ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರ ಅಂದ್ರೆ ಅದು ಬೊಮ್ಮಾಯಿ ಸರ್ಕಾರ. 40 ರಿಂದ 50 ಪರ್ಸೆಂಟೇಜ್ ಭ್ರಷ್ಟಾಚಾರದಲ್ಲಿ ಬಿಜೆಪಿ ಮುಳುಗಿದೆ ಎಂದು ಟೀಕಿಸಿದರು.
ಮಠದ ಅನುದಾನದಲ್ಲೂ ಭ್ರಷ್ಟಾಚಾರ..ಮಠಗಳಿಗೆ ನೀಡುವ ಅನುದಾನದಲ್ಲಿಯೂ ಭ್ರಷ್ಟಾಚಾರ ಬಿಟ್ಟಿಲ್ಲ. ಶೇ.05 ಪರ್ಸೆಂಟ್ ಡಿಸ್ಕೌಂಟ್ ನೀಡಿ 35 ಪರ್ಸೆಂಟ್ ಕಮಿಷನ್ ಹೊಡೆದಿದೆ. ಕರ್ನಾಟಕದಲ್ಲಿ 40% ಹೊರತಾಗಿ ಕರ್ನಾಟಕದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ರಾಜ್ಯದಲ್ಲಿ ನೌಕರಿಗಳು ಬಿಕರಿ ಆಗುತ್ತಿವೆ. ಪಿಎಸ್ಐ ಹಗರಣ ನೇರವಾಗಿ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ಬಾಗಿಲಿಗೆ ಬಂದಿದೆ ಎಂದು ಸುರ್ಜೆವಾಲಾ ಆರೋಪಿಸಿದರು.