ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಹುಬ್ಬಳ್ಳಿ:ಮಹಿಳಾ ಕಾಂಗ್ರೆಸ್ ನಡಿಗೆ ಮತದಾರರ ಬಳಿಗೆ. ನಾ ನಾಯಕಿ ನಾರಿಶಕ್ತಿ ಮತ್ತು ಮತದಾರರ ಪಟ್ಟಿ ಪರಿಶೀಲನೆ ಅಭಿಯಾನವನ್ನು ಕೆಪಿಸಿಸಿ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನೇರವಾಗಿ ಚುನಾವಣೆಯನ್ನು ಎದುರಿಸುವುದನ್ನು ಬಿಟ್ಟು ಒಂದು ಮನೆ ಒಂದು ಮತ ಡಿಲೀಟ್ ಎಂಬ ಅಜೆಂಡಾ ಹಾಕಿಕೊಂಡು ಇಂತಹ ನೀಚ್ ಕೃತ್ಯಕ್ಕೆ ಮಾಡುತ್ತಿದ್ದಾರೆ. ಇದೊಂದು ಮನುಷ್ಯತ್ವ ಇಲ್ಲದ ಸರ್ಕಾರವಾಗಿದೆ ಎಂದು ದೂರಿದರು.
ಬಿಜೆಪಿ ಸರ್ಕಾರದಲ್ಲಿ ಯುವಕ - ಯುವತಿಯರಿಗೆ ಉದ್ಯೋಗವಿಲ್ಲ. ಜೊತೆಗೆ ಮಹಿಳೆಯರಿಗೆ ರಕ್ಷಣೆಯಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ಚಕಾರ ಎತ್ತಿಲ್ಲ ಎಂದರು. ಹಲವಾರು ವೈಫಲ್ಯಗಳನ್ನು ಬಿಜೆಪಿ ಒಳಗೊಂಡಿದೆ. ಹೀಗಾಗಿ ಮಹಿಳಾ ಕಾಂಗ್ರೆಸ್ 20 ಪ್ರಶ್ನೆಗಳನ್ನು ಇಟ್ಟುಕೊಂಡು ಬೂತ್ ಮಟ್ಟದಲ್ಲಿ ಜನರ ಬಳಿಗೆ ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೋವನ್ನು ಕಚೇರಿಯಲ್ಲಿ ತೆಗೆದು ಹಾಕಿದವರು ಇದೀಗ ಮತ ಬ್ಯಾಂಕ್ಗಾಗಿ ಅವರ ಫೋಟೋ ಇಟ್ಟು ಪೂಜೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಮುಂಬರುವ ಚುನಾವಣೆಗಾಗಿ 85 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 18 ಜನರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಜನವರಿ ಸಮಯ ಚಿತ್ರದುರ್ಗದಲ್ಲಿ ಪಕ್ಷದ ವತಿಯಿಂದ ಬೃಹತ್ ಎಸ್.ಸಿ, ಎಸ್ ಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಮಹಿಳೆಯರಿಗಾಗಿಯೇ ಪ್ರತ್ಯೇಕ ಸಮಾವೇಶ, ಚುನಾವಣೆಯಲ್ಲಿ ಪ್ರತ್ಯೇಕ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ :ನರೇಗಾ ಯೋಜನೆ ಇರದಿದ್ದರೆ ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿತ್ತು: ಪುಷ್ಪಾ ಅಮರನಾಥ ಕಳವಳ